Monday, January 20, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರೈ ಎಜುಕೇಶನಲ್ ಟ್ರಸ್ಟ್ ನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ –ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಜಂಟಿ ಆಶ್ರಯದಲ್ಲಿ ನಾಳೆ (ಮಾ. 23 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದು ಟ್ರಸ್ಟ್ನ ಕಾಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.


ಮಾ. 23 ರಂದು ಬೆಳಿಗ್ಗೆ 11 ಗಂಟೆಗೆ ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಿಯುಸಿ ನಂತರ ವಿದ್ಯಾರ್ಥಿಗಳು ಯಾವ ಕೋರ್ಸು ಕಲಿತರೆ ಏನು ಉದ್ಯೋಗ ಪಡೆದುಕೊಳ್ಳಬಹುದು, ಕೋರ್ಸುಗಳು ಎಲ್ಲೆಲ್ಲಿ ಸಿಗುತ್ತದೆ, ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವೃತ್ತಿಪರ ಕೋರ್ಸುಗಳು ಹೇಗೆ ಪರಿಣಾಮಕಾರಿ ಎಂಬ ವಿಚಾರದ ಬಗ್ಗೆ ಕಾರ್ಯಾಗಾರ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದಾರೆ.ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಸಪಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ ವಿ ಸೂರ್ಯಾನಾರಾಯಣರವರು ಕಾರ್ಯಾಗಾರ ನಡೆಸಿಕೊಡಲಿದ್ದು, ಕಾರ್ಯಕ್ರಮದಲ್ಲಿ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟಿ ಇದರ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ, ಕ್ಯಾಡೊಕಾನ್ ವಿದ್ಯಾ ಸಂಸ್ಥೆ ಬೆಂಗಳೂರು ಇದರ ಶ್ರದ್ದಾ ಎಂ ರವರು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು