Tuesday, January 21, 2025
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸೋಶಿಯಲ್ ಮಿಡಿಯಾ ಸ್ಟಾರ್ ಹಾಗೂ ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ – ಕಹಳೆ ನ್ಯೂಸ್

ಸೋಶಿಯಲ್ ಮಿಡಿಯಾ ಸ್ಟಾರ್ ಹಾಗೂ ಕನ್ನಡದ ಬಿಗ್ ಬಾಸ್ ಒಟಿಟಿ ಸೀಸನ್ ಮೂಲಕ ಮತ್ತಷ್ಟು ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ.

ಸೋನು ಗೌಡ ‘ಸೇವಂತಿ’ ಎನ್ನುವ 8 ವರ್ಷದ ಬಡ ಬಾಲಕಿಯನ್ನು ದತ್ತು ತೆಗೆದುಕೊಂಡಿದ್ದು, ಇದೀಗ ಅದುವೇ ಅವರಿಗೆ ಮುಳ್ಳಾಗಿ ಪರಿಣಮಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕರ್ನಾಟಕ ಭಾಗದ 8 ವರ್ಷದ ಮಗು ಸೇವಂತಿಯನ್ನು ಸೋನು ಶ್ರೀನಿವಾಸ್ ಗೌಡ ದತ್ತು ತೆಗೆದುಕೊಂಡಿದ್ದಾರೆ. ಆದರೆ, ಅವರು ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ ಎಂದು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಜೆ.ಜೆ.ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ. ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರ ದಾಖಲಾಗಿದ್ದು, ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣಕ್ಕೆ ಸಂಬAಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದು, ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಅವರನ್ನು ಬಂಧಿಸಿದ್ದಾರೆ.