Recent Posts

Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಚಲಪತಿ – ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕಿನಲ್ಲಿ ಮಾದರಿ ಮತಗಟ್ಟೆಗೆ ಆಯ್ಕೆಯಾದ ಗ್ರಾಮ ಪಂಚಾಯತ್ ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ನೂತನ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಖೀ ಎಂಬ ವಿಷಯಕ್ಕೆ ಆಯ್ಕೆಯಾದ ಮಾದರಿ ಮತಗಟ್ಟೆಗಳಿಗೆ ಅಲಂಕಾರವನ್ನು ಮಾಡಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ರಂಗೋಲಿಗಳನ್ನು ಬಿಡಿಸಿ, ಮತಗಟ್ಟೆಯನ್ನು ಅಕರ್ಷಕಗೊಳಿಸುವಂತೆ ಹಾಗೂ ಮತಗಟ್ಟೆಗೆ ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿರುವ ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ, ವಿದ್ಯುತ್ ಸರಬರಾಜು ಹಾಗೂ ರ್ಯಾಂಪ್ ಗಳು ಸೇರಿದಂತೆ ಚುನಾವಣಾ ದಿನದ ಮುಂಚಿತವಾಗಿ ಎಲ್ಲಾ ಮತಗಟ್ಟೆಗಳಲ್ಲಿ ವ್ಯವಸ್ಥೆಯನ್ನು ಸರಿಪಡಿಸುವಂತೆ ಸಂಬಂಧಪಟ್ಟ ಶಾಲಾ ಶಿಕ್ಷಕರಿಗೆ ಕಾರ್ಯನಿರ್ವಾಹಕ ಅಧಿಕಾರಿಯವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆಯಲ್ಲಿ ಹೊಸಬೆಟ್ಟು ಹಾಗೂ ದರೆಗುಡ್ಡೆ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯ ಸಂದರ್ಭದಲ್ಲಿ ಮತದಾನದ ಮಹತ್ವ ತಿಳಿಸಿ ಮತದಾನದ ಕುರಿತಾದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರಾದ ಅನ್ವಯ, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳು ಇದ್ದರು.
ಭೇಟಿಯ ವೇಳೆ ಬೆಳುವಾಯಿ ಚೆಕ್ ಪೋಸ್ಟ್ ಹಾಗೂ ಮಾರೂರು ಚೆಕ್ ಪೋಸ್ಟ್ ಗೆ ತೆರಳಿ ವಾಹನಗಳ ತಪಾಸಣೆ ನಡೆಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು