Sunday, January 19, 2025
ದಕ್ಷಿಣ ಕನ್ನಡಸುಬ್ರಹ್ಮಣ್ಯ

ಮಾ.24 ರಂದು (ನಾಳೆ) ಸುಬ್ರಹ್ಮಣ್ಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ…-ಕಹಳೆ ನ್ಯೂಸ್

 ಸುಬ್ರಹ್ಮಣ್ಯ: ಜಸ್ಟಿಸ್ ಹೆಗಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ಮತ್ತು ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ಲಯನ್ಸ್ ಕ್ಲಬ್, ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ ಕಣ್ಣು ಕಿವಿ, ಮೂಗು, ಗಂಟಲು, ಚರ್ಮರೋಗ ತಜ್ಞರು ಮಧುಮೇಹ ಮತ್ತು ವೈದ್ಯಕೀಯ ತಜ್ಞರಿಂದ ಸುಬ್ರಹ್ಮಣ್ಯದ ಸದಾನಂದರಿ ಆಸ್ಪತ್ರೆಯಲ್ಲಿ ಮಾ 24ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಜರಗದಿರುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಬಿರವು ಬೆಳಿಗ್ಗೆ 9:30ರಿಂದ 1 ಗಂಟೆಯವರೆಗೆ ನಡೆಯಲಿರುವುದು. ಶಿಬಿರದಲ್ಲಿ ವೈದ್ಯರು ಸೂಚಿಸಿದವರಿಗೆ ಇಸಿಜಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ಸಾಮಾನ್ಯ ಔಷಧಿಗಳನ್ನು ಉಚಿತವಾಗಿ ನೀಡಲಾಗುವುದು. ಸಾಮಾನ್ಯ ಮತ್ತು ನಿಯಮಿತ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು. ಕೆ ಎಸ್ ಹೆಗಡೆ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರವನ್ನು ಉಚಿತವಾಗಿ ಮಾಡಿಕೊಡಲಾಗುವುದು ಎಂದು ಸಂಕಟಗರು ತಿಳಿಸಿರುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಂದು ಇದರ ಉಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು