BJP 5ನೇ ಪಟ್ಟಿ ರಿಲೀಸ್ ; ಉತ್ತರ ಕನ್ನಡದಲ್ಲಿ ಕಾಗೇರಿ, ಬೆಳಗಾವಿಯಲ್ಲಿ ಶೆಟ್ಟರ್, ಚಿಕ್ಕಬಳ್ಳಾಪುರ ಸುಧಾಕರ್ ಸ್ಪರ್ಧೆ – ಕಹಳೆ ನ್ಯೂಸ್
ನವದೆಹಲಿ: ಲೋಕಸಭಾ ಚುನಾವಣೆಗೆ (Lok Sabha Election 2024) ಬಿಜೆಪಿಯು (BJP) ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಬೆಳಗಾವಿಯಿಂದ ಜಗದೀಶ್ ಶೆಟ್ಟರ್ (Jagadeesh Shettar), ರಾಯಚೂರು- ರಾಜಾ ಅಮರೇಶ್ವರ ನಾಯಕ್, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಚಿತ್ರದುರ್ಗದಿಂದ ಡಾ. ಕೆ.ಸುಧಾಕರ್ (Dr.K.Sudhakar) ಅವರಿಗೆ ಟಿಕೆಟ್ ನೀಡಿದೆ.
ಚಿಕ್ಕಬಳ್ಳಾಪುರಕ್ಕೆ ಹೈಕಮಾಂಡ್ ಕೋಟಾದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಡಾ. ಕೆ.ಸುಧಾಕರ್‌ಗೆ ಟಿಕೆಟ್ ಹೈಕಮಾಂಡ್ ಕೋಟಾದಲ್ಲಿ ನೀಡಿದೆ ಎನ್ನಲಾಗಿದೆ. ಸ್ಥಳೀಯವಾಗಿ ಸುಧಾಕರ್ ಪ್ರಭಾವ ಮತ್ತು ಬಿಜೆಪಿ ಕೋಟೆ ಎಂಬ ಲೆಕ್ಕಾಚಾರದಲ್ಲಿ ಟಿಕೆಟ್ ನೀಡಲಾಗಿದೆ.
ಇನ್ನು ಬೆಳಗಾವಿಯಲ್ಲಿ ಹಾಲಿ ಸಂಸದೆ ಮಂಗಳಾ ಅಂಗಡಿ ಬದಲು ಜಗದೀಶ್ ಶೆಟ್ಟರ್‌ಗೆ ಪಕ್ಷ ಮಣೆ ಹಾಕಿದೆ. ಸ್ಥಳೀಯರ ವಿರೋಧದ ಮಧ್ಯೆಯೂ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ವಾಪಸ್ ಆಗಿದ್ದ ಜಗದೀಶ್ ಶೆಟ್ಟರ್‌ಗೆ ಬೆಳಗಾವಿ ಟಿಕೆಟ್ ನೀಡಲಾಗಿದೆ. ಯಡಿಯೂರಪ್ಪ ಒತ್ತಾಯದ ಮೇರೆಗೆ ಶೆಟ್ಟರ್‌ಗೆ ಟಿಕೆಟ್ ಸಿಕ್ಕಿದೆ. ಸ್ಥಳೀಯ ನಾಯಕರ ಜೊತೆ ಮಾಜಿ ಸಿಎಂ ಯಡಿಯೂರಪ್ಪ ಸಮಾಲೋಚನೆಗೆ ನಿರ್ಧಾರ ಮಾಡಿದ್ದಾರೆ. ಮುಂದಿನ ವಾರವೇ ಬೆಳಗಾವಿ ಸಂಧಾನ ಕಸರತ್ತು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.