ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳಲಾಗುವುದು: ಸುಪ್ರೀಂಕೋರ್ಟ್ – ಕಹಳೆ ನ್ಯೂಸ್
ದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸುವ ತನ್ನ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಇಂದು ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನು ಒಳಗೊಂಡ ಪೀಠವು ತನ್ನ ಮಹತ್ವದ ಆದೇಶವನ್ನು ತುರ್ತಾಗಿ ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದು, ನ.13 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.