ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ – – ಕಹಳೆ ನ್ಯೂಸ್
ಮಾಬುಕಳ : ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ದಿನಾಂಕ 23ರ ಶನಿವಾರ ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಮುನಿಯಾಲು ಆರ್ಯುವೇದ ಕಾಲೇಜಿನ ಪ್ರಾಂಶುಪಾಲರಾದ ಡಾ| ಸತ್ಯನಾರಾಯಣ ಬಿ. ಇವರು ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ತಮ್ಮ ಹಿತ ನುಡಿಯಲ್ಲಿ “ರೋಗಿಯ ಜವಾಬ್ದಾರಿ, ವೈದ್ಯರಿಗಷ್ಟೇ ಅಲ್ಲದೇ ನರ್ಸ್ಗಳ ಮೇಲೂ ಇರುತ್ತದೆ. ವೈದ್ಯರಿಲ್ಲದ ಸಂದರ್ಭದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರನ್ನು ಚೆನ್ನಾಗಿ ಆರೈಕೆ ಮಾಡುವ ಕೆಲಸ ನರ್ಸ್ಗಳು ಮಾಡುತ್ತಾರೆ, ಈ ರೀತಿಯ ಸೇವೆ ಮಾಡಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಆದ್ದರಿಂದ ತಾವೆಲ್ಲರೂ ಈ ವಿದ್ಯಾಭ್ಯಾಸವನ್ನು ಪೂರೈಸಿ, ಸಮಾಜಕ್ಕೆ ಉತ್ತಮ ಸೇವೆ ನೀಡಬೇಕು” ಎಂದು ಹೇಳಿದರು.
ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಅಧ್ಯಕ್ಷರಾದ ಡಾ| ದೈವಿಕ್ ಟಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳಿಗೆ ನರ್ಸಿಂಗ್ ಕೋರ್ಸಿನ ಪ್ರಾಮುಖ್ಯತೆಯನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು. ಹಾಗೆಯೇ ಕಾಲೇಜಿನ ಮುಖ್ಯಸ್ಥರಾದ ತಾರನಾಥ್ ಶೆಟ್ಟಿ ಉಪಸ್ಥಿತರಿದ್ದು, ಕಾಲೇಜಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲತಾವ್ ಮೋಹನದಾಸ್ ಶೆಟ್ಟಿ ಸ್ಮರಣಾರ್ಥ ಶೈಕ್ಷಣಿಕ ಪ್ರಶಸ್ತಿಯೊಂದಿಗೆ ನಗದು ಬಹುಮಾನ ನೀಡಿ ಗೌರವಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಮಿತಾಮೋಲ್ ಇ.ಎಮ್. ಇವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ನೀಡಿದರು. ಉಪಪಾಂಶುಪಾಲರಾದ ಶ್ರೀಮತಿ ಸೆಲ್ಮಾ ಲೂವಿಸ್ ಇವರು ಪ್ರತಿಜ್ಞಾವಿಧಿ ಸ್ವೀಕರಿಸುವ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಕುಮಾರಿ ಅಮಿಷಾ ನಿರೂಪಿಸಿ, ಶ್ರೀಮತಿ ವೀಣಾ ಸ್ವಾಗತಿಸಿದರು. ಕುಮಾರಿ ಐಶ್ವರ್ಯ ವಂದನಾರ್ಪಣೆಗೈದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.