Sunday, January 19, 2025
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಕುಕ್ಕೆ ಸುಬ್ರಹ್ಮಣ್ಯ : ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ನಕ್ಸಲರ ಚಲನವಲನ ಪತ್ತೆಯಾಗಿದೆ.
ಶನಿವಾರ ಸಂಜೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿ ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ.

ಕಳೆದ ವಾರ ನಕ್ಸಲರು ಕಾಣಿಸಿಕೊಂಡ ಕೂಜಿಮಲೆ ಮತ್ತು ಶನಿವಾರ ಕಾಣಿಸಿದ ಐನೆಕಿದು ನಡುವೆ ಸುಮಾರು 25.ಕಿ.ಮೀ. ಅಂತರವಿದೆ. ವಿಶೇಷ ಎಂದರೆ ನಕ್ಸಲ್ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಇದೇ ಪರಿಸರದಲ್ಲಿ ಸುತ್ತಾಡುತ್ತಿದ್ದ ನಕ್ಸಲರು ಎಎನ್‍ಎಫ್ ತಂಡಕ್ಕೆ ಕಾಣಿಸಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು, ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯದೊಳಗೆ ಸಂಪರ್ಕ ಸಾಧಿಸಲು ಸಾಧ್ಯವಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು