Sunday, January 19, 2025
ದೆಹಲಿಸುದ್ದಿ

ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ – ಕಹಳೆ ನ್ಯೂಸ್

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ವಯೋಸಹಜ ಕಾಯಿಲೆಗಳಿಂದ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ತಿಳಿಸಿದೆ.

ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನದ ಹೇಳಿಕೆ ಪ್ರಕಾರ ದಕ್ಷಿಣ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ರಾತ್ರಿ 8.14ಕ್ಕೆ ಅವರು ಮೃತಪಟ್ಟಿದ್ದಾರೆ. ಸ್ಮರಣಾನಂದ ಅವರನ್ನು ಜನವರಿ 29ರಂದು ಮೂತ್ರನಾಳ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 3ರಂದು ಅವರನ್ನು ಉಸಿರಾಟದ ತೊಂದರೆಯ ಕಾರಣದಿಂದ ಕೃತಕ ಉಸಿರಾಟದ ವ್ಯವಸ್ಥೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ಸ್ವರೂಪದ ಮೂತ್ರಪಿಂಡ ಸಮಸ್ಯೆ ಕಾಡುತ್ತಿತ್ತು ಮತ್ತು ಹಿಮೊಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿತ್ತು ಆಸ್ಪತ್ರೆ ಮೂಲಗಳು ಹೇಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, “ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್‌ನ ಪೂಜ್ಯ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಸ್ಮರಣಾನಂದ ಜಿ ಮಹಾರಾಜ್ ಅವರು ತಮ್ಮ ಜೀವನವನ್ನು ಆಧ್ಯಾತ್ಮಿಕತೆ ಮತ್ತು ಸೇವೆಗೆ ಮುಡಿಪಾಗಿಟ್ಟರು. ಅವರು ಅಸಂಖ್ಯಾತ ಹೃದಯ ಮತ್ತು ಮನಸ್ಸುಗಳಲ್ಲಿ ಅಳಿಸಲಾಗದ ಛಾಪು ಮೂಡಿಸಿದರು. ಅವರ ಸಹಾನುಭೂತಿ ಮತ್ತು ಬುದ್ಧಿವಂತಿಕೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ” ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು