Sunday, January 19, 2025
ಬೆಂಗಳೂರುಮೈಸೂರುರಾಜಕೀಯಸುದ್ದಿ

ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ, ಸಿಎಂ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು : ಪಕ್ಷ ಬಿಡುತ್ತಿದ್ದ ಮುಖಂಡನ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿ – ಕಹಳೆ ನ್ಯೂಸ್

ಒಂದೆಡೆ ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಲು ಇಂದಿಡೀ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ.

ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ ಕುಳಿತುಕೊಂಡು ಗಾಳ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ ಪಕ್ಷ ಬಿಟ್ಟು ಕಾಂಗ್ರೆಸ್​​ ಸೇರಲು ಮುಂದಾಗಿದ್ದ ಮುಖಂಡನನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರುಣ ಕ್ಷೇತ್ರದ ಮುಖಂಡ ಸದಾನಂದರನ್ನು ಭೇಟಿಯಾದ ವಿಜಯೇಂದ್ರ ಅವರ ಮನವೊಲಿಸಿದ್ದಾರೆ. ಸದಾನಂದ ಇಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದರು. ಹೀಗಾಗಿ ಮಂಗಳವಾರ ರಾತ್ರಿ ಅವರನ್ನು ಭೇಟಿಯಾಗಿ ಮಾತನಾಡಿದ್ದ ವಿಜಯೇಂದ್ರ ಸಿಹಿ ತಿನಿಸಿ ಪಕ್ಷದಲ್ಲೇ ಉಳಿಸಿಕೊಂಡಿದ್ದಾರೆ. ಈ ಮೂಲಕ ‘ಕೈ’ ನಾಯಕರಿಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು