Sunday, January 19, 2025
ಕ್ರೈಮ್ಬೆಂಗಳೂರುಸುದ್ದಿ

ಬೆಂಗ್ಳೂರಲ್ಲಿ ಪೋರ್ನ್‌ ದಂಧೆ; ಹಣಕ್ಕಾಗಿ ತಮ್ಮದೇ ವೀಡಿಯೋಗಳನ್ನ ಪೋರ್ನ್‌ ಸೈಟ್‌ನಲ್ಲಿ ಅಪ್ಲೋಡ್‌ ಮಾಡ್ತಿದ್ದ ಜೋಡಿ! – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹಣ ಗಳಿಸುವ ಸಲುವಾಗಿ ಎಂತಹ ಕೆಲಸಗಳನ್ನ ಮಾಡ್ತಾರೆ ಅನ್ನೋದು ಬೆಂಗಳೂರು (Bengaluru) ಮಹಾನಗರದಲ್ಲಿ ಆಗಾಗ್ಗೆ ಬೆಳಕಿಗೆ ಬರುತ್ತಿದೆ. ಅದೇ ರೀತಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಲೈಂಗಿಕ ಚಟುವಟಿಕೆ ನಡೆಸಿ, ಚಿತ್ರೀಕರಿಸಿದ ವೀಡಿಯೋವನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೋಡ್‌ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಗುತ್ತಿಗೆದಾರ ಅಮರ್‌ನಾಥ್‌ ಎಂಬವರು ಐಟಿ ಆಕ್ಟ್ (ಮಾಹಿತಿ ತಂತ್ರಜ್ಞಾನ ಕಾಯ್ದೆ) (IT Act) ಅಡಿಯಲ್ಲಿ ದೂರು ನೀಡಿದ್ದು, ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ (Jnanabharathi Police Station) ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಣಗಳಿಸುವ ಉದ್ದೇಶದಿಂದ ಮಹಿಳೆ ಸೌಮ್ಯ ಆಕೆಯ ಪ್ರಿಯಕರ ರವಿ ರಾಮನಗರ ಎಂಬಾತನೊಂದಿಗೆ ಸೇರಿ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿದ್ದಾಳೆ. ಈ ಸೀಕ್ರೇಟ್‌ ಕೆಲಸಕ್ಕಾಗಿಯೇ ಉಲ್ಲಾಳ ಉಪನಗರದ ಬಳಿ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡಿದ್ದಾರೆ. ಅಲ್ಲಿ ತಾವೇ ಲೈಂಗಿಕ ಚಟುವಟಿಕೆ ನಡೆಸಿ, ಅದನ್ನು ಚಿತ್ರೀಕರಿಸಿ ಪೋರ್ನ್ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಿದ್ದಾರೆ. ಇದರ ವೀಡಿಯೋ ಚಿತ್ರೀಕರಣಕ್ಕೆ ಮತ್ತೊಂದು ಜೋಡಿ ಸಹಕಾರ ನೀಡಿದೆ. ಆದ್ದರಿಂದ ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಅಮರನಾಥ್‌ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸುತ್ತಿದ್ದಂತೆ ಅಮರಮಾಥ್‌ಗೆ ಖತರ್ನಾಕ್‌ ಜೋಡಿಗಳು ಧಮ್ಕಿ ಹಾಕಿದ್ದು, ಪೊಲೀಸರ ಬಳಿ ದೂರುದಾರರು ರಕ್ಷಣೆ ಕೋರಿದ್ದಾರೆ.

ಎಫ್‌ಐಆರ್‌ನಲ್ಲಿ ಏನಿದೆ?
ಸೌಮ್ಯ ಎಂಬಾಕೆ ಮತ್ತು ಆಕೆಯ ಪ್ರಿಯಕರ ರವಿ ರಾಮನಗರ ಇಬ್ಬರೂ ಸೇರಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಪೋರ್ನ್‌ ವೆಬ್‌ಸೈಟ್‌ನಲ್ಲಿ ಪ್ರಸಾರ ಮಾಡಿದ್ದಾರೆ. ಇದು ಐಟಿ ಆಕ್ಟ್‌ ಸೆಕ್ಷನ್‌ 67 ಮತ್ತು 67A ಅನ್ವಯ ಅಪರಾಧವಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ದೂರಿನೊಂದಿಗೆ ನೀಡಿದ್ದೇನೆ.

ಈ ಅಶ್ಲೀಲ ಚಿತ್ರೀಕರಣಕ್ಕಾಗಿ ಉಲ್ಲಾಳ ಉಪನಗರದ ಮುಖ್ಯರಸ್ತೆಯ 5ನೇ ಮೇನ್‌ನಲ್ಲಿ ಮನೆಯೊಂದನ್ನ ಭೋಗ್ಯಕ್ಕೆ ಪಡೆದುಕೊಂಡಿದ್ದಾರೆ. ಇಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ಕೃತ್ಯಕ್ಕೆ ರೇಣುಕಾ ಚೊಟ್ಟನಹಳ್ಳಿ, ರಮೇಶ್‌ ಪಾಂಡವಪುರ ಸಹಕರಿಸಿದ್ದಾರೆ. ಈ ನಾಲ್ವರು ಹಣ ಮಾಡುವ ಉದ್ದೇಶದಿಂದ ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವಿಷಯ ತಿಳಿಸಿದ ನನ್ನ ಮೇಲೆ ಯಾವುದೇ ಹಲ್ಲೆ ಆಗದಂತೆ ಸೂಕ್ಷ ರಕ್ಷಣೆ ನೀಡಬೇಕು ಎಂದು ಅಮರನಾಥ್‌ ಮನವಿ ಮಾಡಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.