Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಶಾರ್ಟ್ ಸರ್ಕಿಟ್ ನಿಂದ ಅಗ್ನಿ ಅವಘಡ : ಸುಟ್ಟು ಕರಕಲಾದ ಶಿಹಾರ ಎಂಟರ್ ಪ್ರೈಸಸ್ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಭಾರಿ ಅಗ್ನಿ ಅನಾಹುತ ಸಂಭವಿಸಿದೆ.

ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ ಪ್ರೈಸಸ್ ನಲ್ಲಿ ಈ ಅಗ್ನಿ ದುರಂತ ಉಂಟಾಗಿದ್ದು, ತಡರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡಿ ವ್ಯಾಪಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ ಮೊಹಮ್ಮದ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು