Recent Posts

Sunday, January 19, 2025
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪಾರು’ ಧಾರಾವಾಹಿ ನಟ ಶರತ್ ಪದ್ಮನಾಭ್ ನಟನೆಯ ‘ಅನಿಮಾ’ ಚಿತ್ರದ ಪೋಸ್ಟರ್ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಾರು’ ಧಾರಾವಾಹಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಈ ಧಾರಾವಾಹಿಯಲ್ಲಿ ಆದಿತ್ಯ ಪಾತ್ರದ ಮೂಲಕ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿದ್ದ ನಟ ಶರತ್ ಪದ್ಮನಾಭ್ ಇದೀಗ ‘ಅನಿಮಾ’ ಸಿನಿಮಾಕ್ಕೆ ನಟನಾಗುತ್ತಿದ್ದಾರೆ.

ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ‘ಅನಿಮಾ’ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ ಎಂದು ಚಿತ್ರತಂಡ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್ ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು, ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್ ಹೇಳಿದ್ದಾರೆ. ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಅನಿಮಾ’ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗ್ಲೇ ಶೂಟಿಂಗ್ ನಡೆಸಲಾಗಿದೆ. ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗ್ತಿದೆ.

ಇನ್ನು ಶರತ್ ನಾಯಕನಾಗಿ ನಟಿಸ್ತಿದ್ದು, ಅನುಷಾ ಕೃಷ್ಣ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ, ಸೇರಿದಂತೆ ಹಲವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಹಿನ್ನೆಲೆ ಸಂಗೀತ, ಉಜ್ವಲ್ ಚಂದ್ರ ಸಂಕಲನ ‘ಅನಿಮಾ’ ಚಿತ್ರಕ್ಕಿದೆ.