Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಗೆ ಚೂರಿ ಇರಿತ : : ಗಾಯಾಳು ಸರಕಾರಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು: KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದಿರುವ ಘಟನೆ ಪುತ್ತೂರು KSRTC ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಸ್ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿಯಿಂದ ಒಬ್ಬ ಕಾರ್ಮಿಕ ಮತ್ತೊರ್ವ ಕಾರ್ಮಿಕನಿಗೆ ಇರಿದಿದ್ದಾನೆ. ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆನಂದ್ KSRTC ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುರ್ಗೇಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಬಳಿಕ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ. ಈ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.