ಕೇಂದ್ರ ಸರ್ಕಾರದಿಂದ ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ : ಏ.1ರಿಂದ ವೇತನದಲ್ಲಿ 3-10 ಶೇಕಡಾ ಹೆಚ್ಚಳ – ಕಹಳೆ ನ್ಯೂಸ್
ನವದೆಹಲಿ: ನರೇಗಾ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಅವರ ಸಂಬಳ ಹೆಚ್ಚಿಸಿದೆ.
ಚುನಾವಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರವು 2024-25 ನೇ ಹಣಕಾಸು ವರ್ಷಕ್ಕೆ ಜಾರಿಯಾಗುವಂತೆ MGNREGA ಕಾರ್ಮಿಕರ ವೇತನ ದರದಲ್ಲಿ 3-10 ಶೇಕಡಾ ಹೆಚ್ಚಳವನ್ನು ಘೋಷಿಸಲಿದೆ. ಹೊಸ ವೇತನ ದರಗಳು ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿವೆ.
ಶೇಕಡಾವಾರು ಹೆಚ್ಚಳಕ್ಕೆ ಸಂಬಂಧಿಸಿದಂತೆ 2023-24 ಕ್ಕೆ ಹೋಲಿಸಿದರೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವೇತನ ದರಗಳು 2024-25 ರಲ್ಲಿ ಅತ್ಯಂತ ಕಡಿಮೆ ಶೇಕಡಾ 3 ರಷ್ಟು ಹೆಚ್ಚಳವನ್ನು ಕಂಡಿದೆ. ಆದರೆ, ಗೋವಾದಲ್ಲಿ ಶೇಕಡಾ 10.6 ರಷ್ಟು ಹೆಚ್ಚಳವಾಗಲಿದೆ.
ಸಾರ್ವತ್ರಿಕ ಚುನಾವಣೆಗೆ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವೇತನ ದರಗಳ ಕುರಿತು ಅಧಿಸೂಚನೆ ಹೊರಡಿಸಲು ಗ್ರಾಮೀಣಾಭಿವೃದ್ಧಿ ಸಚಿವಾಲಯ ಚುನಾವಣಾ ಆಯೋಗದಿಂದ ಅನುಮತಿ ಕೋರಿದೆ.