Recent Posts

Sunday, January 19, 2025
ಕ್ರೈಮ್ಸುದ್ದಿ

ಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು– ಕಹಳೆ ನ್ಯೂಸ್

ಥಾಣೆ: ಪರೀಕ್ಷೆ ವೇಳೆ ತನ್ನ ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಭೀವಂಡಿ ಪಟ್ಟದ 10ನೇ ತರಗತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿಸಿದ ಕಾರಣ ಮೂವರು ವಿದ್ಯಾರ್ಥಿಗಳು ಸಹಪಾಠಿ ಮೇಲೆ ಹಲ್ಲೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರೀಕ್ಷೆ ಮುಗಿದು ಹೊರಬರುತ್ತಿದ್ದಂತೆ ಸಹಪಾಠಿಯನ್ನು ಹಿಡಿದು ಥಳಿಸಿದ ವಿದ್ಯಾರ್ಥಿಗಳು ಚಾಕುವಿನಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು