Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿ

ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ನಾಪತ್ತೆ : ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ , ಕೊಲ್ಪೆದಬೈಲು ನಿವಾಸಿ ಲಕ್ಮೀನಾರಾಯಣ ಅವರು ಕಾಣೆಯಾದ ಅಧಿಕಾರಿಯಾಗಿದ್ದಾರೆ.
ಮಾ.27ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದವರು ಪೋನ್ ಸ್ವಿಚ್ ಆಪ್ ಆಗಿದೆ. ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಈತನ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣೆಗೆ ಸಂಬAಧಿಸಿದ ಎಸ್.ಎಸ್.ಟಿ.ತಂಡದಲ್ಲಿ ಇವರು ಕರ್ತವ್ಯ ನಿರ್ವಹಿಸಿತ್ತಿದ್ದು, ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಂಡದವರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಕೆಲ ಸಮಯಗಳ ಹಿಂದೆ ಕೂಡ ಇದೇ ರೀತಿ ಕಾಣೆಯಾಗಿದ್ದ ಲಕ್ಮೀನಾರಾಯಣ ಅವರನ್ನು ಪೋಲೀಸರು ಪತ್ತೆ ಹಚ್ಚಿದ್ದರು. ಇದೀಗ ಇವರ ಬೈಕ್ ಮತ್ತು ಮೊಬೈಲ್ ಪೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ಣು, ಲಕ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.