ಮೂಡಬಿದಿರೆ : ಆಳ್ವಾಸ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ – ಕಹಳೆ ನ್ಯೂಸ್
ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಬೆಂಗಳೂರಿನ ವಿಜಯ ನಗರದ ಸಾಧನಾ ಕೋಚಿಂಗ್ ಸೆಂಟರ್ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪ್ರಾರಂಭಿಸುವುದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಮತ್ತು ಸಾಧನಾ ಕೋಚಿಂಗ್ ಸೆಂಟರ್ ನ ಪ್ರವರ್ತಕಿ ಡಾ. ಜ್ಯೋತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಯುಪಿಎಸ್‍ಸಿ, ಕೆಪಿಎಸ್‍ಸಿ ಸೇರಿದಂತೆ ಪ್ರಮುಖ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡಲಾಗುವುದು. ಪದವಿ ಪೂರ್ವ ವಿದ್ಯಾರ್ಥಿಗಳಿಗೆ 6 ತಿಂಗಳ ಫೌಂಡೇಶನ್ ಕೋರ್ಸ್, ಪದವಿ ವಿದ್ಯಾರ್ಥಿಗಳಿಗೆ 3 ವರ್ಷದ ಕೋಚಿಂಗ್ ಮತ್ತು ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 9 ತಿಂಗಳ ಧೀರ್ಘಕಾಲಿನ ಕೋಚಿಂಗ್ ನೀಡಲಾಗುವುದು ಎಂದು ತಿಳಿಸಿದರು.
ಪ್ರಸಕ್ತ ವರ್ಷದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪ್ರಾರಂಭಿಸುವುದಾಗಿ ಮೋಹನ್ ಆಳ್ವ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ಕುರಿಯನ್, ಎಸ್. ಎ. ಸದಾಕತ್ ಹಾಗೂ ಕೋಆರ್ಡಿನೇಟರ್ ಪ್ರಶಾಂತ್ ಉಪಸ್ಥಿತರಿದ್ದರು.