Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆ ; ಏ.2ರಂದು ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ – ಕಹಳೆ ನ್ಯೂಸ್

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಏ.2ರಂದು ಮಧ್ಯಾಹ್ನ ಗಂಟೆ 2ಕ್ಕೆ ತೆಂಕಿಲ ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷರಾಗಿರುವ ಸಂಸದ ನಳಿನ್ ಕುಮಾರ್ ಕಟೀಲ್, ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 221 ಬೂತ್ ನ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಕಾರ್ಯಕರ್ತರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು 3 ಸಾವಿರ ಕ್ಕೂ ಮಿಕ್ಕಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಬಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್,ಹರಿಪ್ರಸಾದ್ ಯಾದವ್ ಉಪಸ್ಥಿತರಿದ್ದರು.