Sunday, January 19, 2025
ಉಡುಪಿಕ್ರೈಮ್ಸುದ್ದಿ

ಉಡುಪಿ: ನಾಲ್ವರ ಕಗ್ಗೊಲೆ ಪ್ರಕರಣದ ಆರೋಪಿ : ಪ್ರವೀಣ್ ಚೌಗುಲೆಗೆ ಜಾಮೀನು ತಿರಸ್ಕರಿಸಿದ ಕೋರ್ಟ್ – ಕಹಳೆ ನ್ಯೂಸ್

ಉಡುಪಿ : ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು(ಮಾ.30) ಆದೇಶ ಮಾಡಿದೆ. ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಆರೋಪಿ ಪರ ವಕೀಲ ರಾಜೇಶ್ ಹಾಗೂ ವಿಶೇಷ ಸರಕಾರಿ ಅಭಿಯೋಜಕರ ಮಧ್ಯೆ ವಾದ ಪ್ರತಿವಾದಗಳು ನಡೆದವು. ಎರಡು ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಜಾಮೀನು ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.30ಕ್ಕೆ ನಿಗದಿ ಪಡಿಸಿ ಆದೇಶ ನೀಡಿದ್ದರು. ಇದರ ಪ್ರಕಾರ, ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ ಸಾಕ್ಷಿಗಳಿಂದ ಮೇಲ್ನೋಟಕ್ಕೆ ಕಂಡು ಬಂದಿದ್ದು ಜಾಮೀನು ನೀಡಿದರೆ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ. ನ್ಯಾಯಾಂಗ ಬಂಧನದಲ್ಲೂ ಆರೋಪಿಗೆ ಚಿಕಿತ್ಸೆ ಪಡೆಯುವ ಅವಕಾಶ ಇರುವುದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದಾಗಿ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು