Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ನಡೆದಿದೆ.

ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಯೋಗೀಶ್ ಪೂಜಾರಿ ಅವರ ಪುತ್ರ ಆನುಶ್ (20) ಮೃತಪಟ್ಟ ಯುವಕ. ಆದಿತ್ಯವಾರ ರಜಾದಿನವಾದ ಕಾರಣ ಅನುಶ್ ಸೇರಿ ಒಟ್ಟು 4 ಮಂದಿ ತಮ್ಮ ಮತ್ತು ಸ್ನೇಹಿತರ ಜೊತೆಯಲ್ಲಿ ನದಿಗೆ ಈಜಲು ತೆರಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ರೂಪೇಶ್ ಸ್ನೇಹಿತರಾದ ಕಿಸಾನ್ , ಅನೀಶ್ ಜೊತೆಯಲ್ಲಿ ತೆರಳಿದ್ದ. ಅನುಶ್ ಅಳ್ವಾಸ್ ಕಾಲೇಜಿನಲ್ಲಿ ಉದ್ಯೋಗದಲ್ಲಿದ್ದ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಬಂದು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು