Monday, January 20, 2025
ಸುದ್ದಿ

ಮಂಗಳೂರು : ಬಾವಿಗೆ ಬಿದ್ದ ಅತೀ ಅಪರೂಪದ ಕರಿ ಚಿರತೆ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು : ಅತೀ ಅಪರೂಪದ ಕರಿ ಚಿರತೆ ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತೆಗೆಯಲು ಹೋದ ವೇಳೆ ಚಿರತೆ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಮೇಲೆತ್ತಲು ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಾಹ್ನದ ವೇಳೆಗೆ ಚಿರತೆಯನ್ನು ಸೆರೆ ಹಿಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಾಚರಣೆಗಾಗಿ ಬಾವಿಯ ಸುತ್ತ ಬಲೆ ಹಾಕಿ ಬಾವಿಗೆ ಏಣಿ ಇಳಿಸಲಾಗಿತ್ತು. ಬಾವಿಯ ದಂಡೆಯ ಸಮೀಪ ಚಿರತೆ ಸೆರೆಗೆ ಬೋನು ಇಡಲಾಗಿತ್ತು.

ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.