Friday, September 20, 2024
ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಆಗಮಿಸಬೇಕಾಗಿತ್ತು.

ಆದ್ರೆ ಅನಾರೋಗ್ಯ ಹಿನ್ನೆಲೆಯಲ್ಲಿ ಸಿಎಂ ಗೈರು ಹಾಜರಾಗಿದ್ದರು. ಹೀಗಾಗಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹೆಗ್ಗಡೆಯವ್ರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭಕ್ಕೂ ಮೊದಲು ನವೀಕರಣಗೊಂಡ ಮಂಜೂಷಾ ವಸ್ತು ಸಂಗ್ರಹಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ರೇವಣ್ಣ, ಹೆಗ್ಗಡೆ ಅವರ ಧರ್ಮಸ್ಥಳ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ಇದೇ ವೇಳೆ, ವೀರೇಂದ್ರ ಹೆಗ್ಗಡೆ ಕುರಿತು ರಚಿತವಾದ ಪುಸ್ತಕ, ಡಾಕ್ಯುಮೆಂಟರಿಯನ್ನ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ಸಿಗ ಆಸ್ಕರ್ ಫರ್ನಾಂಡೀಸ್, ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು