ಬಂಟ್ವಾಳ : ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ – ಕಹಳೆ ನ್ಯೂಸ್
ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಕುಕ್ಕಿಪಾಡಿ, ಇರ್ವತ್ತೂರು, ಬಡಗಕಜೆಕಾರು ಗ್ರಾಮ ಪಂಚಾಯತಿ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ನೈನಾಡು ಪರಿಸರದಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬ್ಲೆ ಮಾತನಾಡಿ, ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವದ ಹಬ್ಬವಾದ ಮತದಾನದಂದು ಎಲ್ಲರೂ ಮತ ಚಲಾಯಿಸಬೇಕು ಎಂದು ಹೇಳಿದರು.
ಸ್ವೀಪ್ ತಾಲೂಕು ತರಬೇತುದಾರರಾದ ಸುರೇಖಾ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮತದಾನ ಜಾಗೃತಿ ನಡೆಸಲಾಯಿತು. ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಕಾಶ್, ಎನ್ನೆಆರ್ ಎಲ್ ಎಮ್ ತಾಲೂಕು ವ್ಯವಸ್ಥಾಪಕ ಪ್ರದೀಪ್ ಕಾಮತ್, ಸಂಗಬೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ರೋಹಿಣಿ, ಪಿಲಾತಬೆಟ್ಟು ಗ್ರಾಮ ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ ಬಾಲಕೃಷ್ಣ, ಇರ್ವತ್ತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾರಾಯಣ ನಾಯ್ಕ ಕೆ., ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಇತರರು ಭಾಗವಹಿಸಿದ್ದರು.