Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿ ಪರಾರಿ…!ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ಸಂಭವಿಸಿದೆ.

ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೆuಟಿಜeಜಿiಟಿeಜಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಈ ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದಾನೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು