Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮಂಗಳೂರು: ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿಯಲಿಯೇ ಆತ್ಮಹತ್ಯೆಗೆ ಯತ್ನ –ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಕ್ಷಣ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನಗರದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು.

ಜಾಹೀರಾತು
ಜಾಹೀರಾತು
ಜಾಹೀರಾತು

2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ ಆಗಿ ಕರ್ತವ್ಯದಲ್ಲಿದ್ದ ಅವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದ. ಹೆಚ್ಚಿನ ನಿಗಾ ಇರುಸಲು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ. ಇವರ ಪತ್ನಿ ಜಯಂತಿ ಸ್ಟಾಫ್ ನರ್ಸ್ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು