ದೆಹಲಿ: ಟೀಂ ಇಂಡಿಯಾ ಕಾಪ್ಟನ್ ವಿರಾಟ್ ಕೊಹ್ಲಿ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10 ಸಾವಿರರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಜಾಗ್‌ನಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ನುಚ್ಚುನೂರು ಮಾಡಿದ್ದಾರೆ.
ವಿರಾಟ್ ಕೊಹ್ಲಿ ಪಂದ್ಯದಲ್ಲಿ 81 ರನ್ ಗಳಿಸುತ್ತಿದ್ದಂತೆ, ಏಕದಿನ ಪಂದ್ಯಗಳಲ್ಲಿ ಅತಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಚಿನ್ ತೆಂಡೂಲ್ಕರ್ 259 ಇನಿಂಗ್ಸ್ ಗಳಲ್ಲಿ ಹತ್ತು ಸಾವಿರ ರನ್ ಪೂರೈಸಿದ್ದರೆ, ವಿರಾಟ್ ಕೊಹ್ಲಿ ಕೇವಲ 205 ಇನಿಂಗ್ಸ್ ಗಳಲ್ಲಿ ಈ ಒಂದು ಸಾಧನೆ ಮಾಡಿದ್ದಾರೆ.