
ಚಿಕ್ಕಮಗಳೂರು: ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಸಾಗಿಸಲಾಗುತ್ತಿತ್ತು.
ಕಡೂರು ತಾಲೂಕಿನ ದೇವನೂರು ಗ್ರಾಮದ ಬಳಿಯ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ 45 ಲಕ್ಷ ಪತ್ತೆಯಾಗಿದೆ. ಸದ್ಯ, ಪೆÇಲೀಸರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.