Monday, March 31, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟ ಪತಿ : ಜಿಗುಪ್ಸೆಗೊಂಡು ನೇಣಿಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ವಿಟ್ಲ: ಇಲ್ಲಿನ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಪತಿ ಮೂರು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಬಳಿಕ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಅವರು ಇಂದು ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ