Sunday, January 19, 2025
ಉಡುಪಿಬೈಂದೂರುರಾಜಕೀಯಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಬೂತ್ ಬೂತ್ ಗಳಲ್ಲೂ ಮತ ಶಿಖಾರಿ ಆರಂಭ : “ಬೂತ್ ಕಡೆಗೆ ಸಮೃದ್ಧ ನಡಿಗೆ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಬೈಂದೂರು: ಲೋಕಸಭಾ ಚುನಾವಣ ಕಣ ರಂಗೇರುತಿದ್ದು, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಿ ಹೊಸ ಸಂಚಲನ, ಚೈತನ್ಯ ತುಂಬಿದ್ದರು. ಇದರ ಮುಂದುವರಿದ ಭಾಗವಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಯವರು ಬೂತ್ ಕಡೆಗೆ ಸಮೃದ್ಧ ನಡಿಗೆ ವಿಶೇಷ ಕಾರ್ಯಕ್ರಮದ ಮೂಲಕ ಮತ ಶಿಖಾರಿ ಬುಧವಾರದಿಂದ ಆರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ನಿರೀಕ್ಷೆಗೂ ಮೀರಿದ ಅಂತರದಲ್ಲಿ ಜಯ ಸಾಧಿಸಬೇಕು. ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಕನಿಷ್ಠ 1 ಲಕ್ಷಕ್ಕೂ ಅಧಿಕ ಲೀಡ್ ನೀಡಬೇಕು ಎನ್ನುವ ನಿರ್ಣಯದಂತೆ ಸಂಘಟನಾತ್ಮಕ ಪ್ರಚಾರ ಪ್ರಕ್ರಿಯೆ ಆರಂಭವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿ ಬೂತ್ ನಲ್ಲೂ ಕಾರ್ಯಕರ್ತರನ್ನು ಭೇಟಿಯಾಗಿ ಬೂತ್ ನ ಪ್ರತಿ ಮನೆಯ ಎಲ್ಲ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ಬರುವಂತೆ ಮಾಡುವುದು, ಮನೆ ಮನೆ ಭೇಟಿ ನೀಡಬೇಕು. ಆ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿಸಬೇಕು ಎಂಬ ಸಂದೇಶವನ್ನು ಬೂತ್ ನಡಿಗೆಯಲ್ಲಿ ಕಾರ್ಯಕರ್ತರಿಗೆ ಮನದಟ್ಟು ಮಾಡುತ್ತಿದ್ದಾರೆ.

ರಾಷ್ಟ್ರೀಯತೆ, ಹಿಂದುತ್ವ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯ, ವಿಶ್ವ ನಾಯಕ ನರೇಂದ್ರ ಮೋದಿ ಯವರ ಸಮರ್ಥ ನಾಯಕತ್ವವೇ ನಮಗೆ ಶ್ರೀರಕ್ಷೆಯಾಗಿದೆ.
ನರೇಂದ್ರ ಮೋದಿಯರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಮೂಲಕ ವಿಕಸಿತ ಭಾರತ ದ ಪರಿಕಲ್ಪನೆಯನ್ನು ಸಾಕಾರ ಮಾಡುಗ ಅಗತ್ಯತೆಯನ್ನು ಪ್ರತಿ ಬೂತ್ ನಲ್ಲೂ ಶಾಸಕರಾದ ಗುರುರಾಜ ಗಂಟಿಹೊಳೆಯವರು ಖುದ್ದು ಕಾರ್ಯಕರ್ತರನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸುತ್ತಿದ್ದಾರೆ.

ಕಾರ್ಯಕರ್ತರ ಉತ್ಸಾಹ

ಬೂತ್ ಕಡೆಗೆ ಸಮೃದ್ಧ ನಡಿಗೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಮುಖಂಡರು, ಹಿತೈಷಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಇದಕ್ಕಾಗಿ ಬಿ.ವೈ.ರಾಘವೇಂದ್ರ ಅವರನ್ನು ಜಯಗಳಿಸಬೇಕು ಎಂಬ ಉತ್ಸಹ, ಸಂಭ್ರಮದಿಂದ ಕಾರ್ಯಕರ್ತರು ಕ್ರಿಯಾಶೀಲರಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ.

ಏ.18ರವರೆಗೂ ಅಭಿಯಾನ
ಏಪ್ರಿಲ್ 3ರಂದು ಶಂಕರನಾರಾಯಣದ ಕುಳ್ಳುಂಜೆ ಮಾವಿನಕೂಡ್ಲು ಎಂಬಲ್ಲಿ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನಕ್ಕೆ ಚಾಲನೆ ದೊರೆಯಿತು. ಮೊದಲ ದಿನ ಉಳ್ಳೂರು-74, ಸಿದ್ಧಾಪುರ, ಹೊಸಂಗಡಿ, ತೊಂಬಟ್ಟು ಭಾಗದ ಎಲ್ಲ ಬೂತ್ ಗಳಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಏ.18ರ ವರೆಗೆ ಕ್ಷೇತ್ರದ ಎಲ್ಲ ಬೂತ್ ಗಳಿಗೂ ಶಾಸಕರು ಸಂಚರಿಸಿ ಕಾರ್ತಕರ್ತರು, ಮುಖಂಡರು, ಹಿತೈಷಿಗಳನ್ನು ಸಂಪರ್ಕ ಮಾಡಲಿದ್ದಾರೆ.