Monday, April 21, 2025
ಸುದ್ದಿ

ಸಿಬಿಐ ನಿರ್ದೇಶಕರ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರ ಬಂಧನ – ಕಹಳೆ ನ್ಯೂಸ್

ನವದೆಹಲಿ: ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮನೆಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಸಿಬಿಐ ನಿರ್ದೇಶಕರನ್ನು ಕಿತ್ತೊಗೆಯಲು ಕೇಂದ್ರಕ್ಕೆ ಅಧಿಕಾರವಿಲ್ಲ ನವದೆಹಲಿಯಲ್ಲಿರುವ ವರ್ಮಾ ನಿವಾಸದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದನ್ನು ಕಂಡ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ. ಜೊತೆಗೆ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರ ವಿರುದ್ಧವೂ ಆರೋಪ ಹಿನ್ನೆಲೆಯಲ್ಲಿ ಅವರನ್ನೂ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ