Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಆರೋಪಿ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ.

ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಅಬ್ದುಲ್ ರಹಿಮಾನ್ ಎಂಬಾತ ಆರೋಪಿಯಾಗಿದ್ದು, ಪರಾರಿಯಾಗಿರುವ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಂಭೀರವಾಗಿ ಗಾಯಗೊಂಡಿರುವ ರಮೀಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಅಬ್ದುಲ್ ರಹಿಮಾನ್ ಯಾವುದೋ ಹಣಕಾಸಿನ ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಜ್ ನನ್ನು ಕೊಲೆ ಮಾಡುವ ಉದ್ದೇಶದಿಂದ ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿಕೊಂಡು, ಮನೆಯೊಳಗೆ ಬಂದು ಚೂರಿಯಿಂದ ಎರಡುಬಾರಿ ತಿವಿದು ಪರಾರಿಯಾಗಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಾಲಾಗಿದ್ದು,ಆರೋಪಿಗಾಗಿ ಪೋಲೀಸರು ಬಲೆಬೀಸಿದ್ದಾರೆ.