Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ – ಕಹಳೆ ನ್ಯೂಸ್

ಬಂದಾರು :  ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪರಮಪೂಜ್ಯ ಬ್ರಹ್ಮಶ್ರೀ ನೀಲೇಶ್ವವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ಪೂಜ್ಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಸಲುವಾಗಿ ಇಂದು ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ ಮಹಾಪೂಜೆ, ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ವಿಜೃಂಭಣೆಯಿ0ದ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಖಂಡ, ಅರ್ಚಕರು, ಸದಾಶಿವ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಯಕ್ಷಗಾನ ಸಮಿತಿಯ ಅಧ್ಯಕ್ಷರು, ಸದಸ್ಯರು, ಸದಾಶಿವ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ ಹಾಗೂ ಪ್ರಗತಿಬಂಧು ಒಕ್ಕೂಟ ಮೈರೋಳಡ್ಕ ಬಂದಾರು ಅಧ್ಯಕ್ಷ, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು. ಸಂಜೆ ಭಜನೆ, ರಾತ್ರಿ ರಕೇಶ್ವರಿ ದೈವದ ನೇಮೋತ್ಸವ, ರಥೋತ್ಸವ ಮತ್ತು ಶಯನೋತ್ಸವ ನಡೆಯಲಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು