Sunday, January 26, 2025
ಕ್ರೈಮ್ಬೆಂಗಳೂರುಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು – ಕಹಳೆ ನ್ಯೂಸ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರನೊಬ್ಬ ಬಲಿಯಾದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ.

ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಣಕ್ಕಿಳಿದಿದ್ದು, ಅವರು ಇಂದು ಕ್ಷೇತ್ರದಲ್ಲಿ ರ್ಯಾಲಿ ನಡೆಸುವಾಗ ಅಪಘಾತ ಸಂಭವಿಸಿದೆ. ಕೆ ಆರ್ ಪುರದ ಗಣೇಶ ದೇಗುಲದ ಬಳಿ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ಪ್ರಕಾಶ್ ಕಾರಿನ ಡೋರ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರಕಾಶ್ ಅವರನ್ನು ಕೆ ಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.