Friday, April 11, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ಮರಳು ಸಹಿತ ವಾಹನ ಬೆಳ್ತಂಗಡಿ ಪೊಲೀಸ್ ವಶಕ್ಕೆ..! -ಕಹಳೆ ನ್ಯೂಸ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಳು ಸಹಿತ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ಇಂದಬೆಟ್ಟು ಗ್ರಾಮದ ಬೆಳ್ಳೂರು ನದಿ ಕಿನಾರೆಯಲ್ಲಿ ನಡೆದಿದೆ.

ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಸೈ ಮುರಳೀಧರ್ ಕೆ ಜಿ ನೇತೃತ್ವದ ಪೊಲೀಸರು ಇಂದಬೆಟ್ಟು ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ಮೂಲಕ ಸಾಗಾಟ ಮಾಡಲು ಯತ್ನಿಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮರಳು ಕಳ್ಳತನ ಮಾಡುತ್ತಿದ್ದ ವಾಹನ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 49/2024 ಕಲಂ: 379 ಡಿ/ತಿ 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ