ಬಿಜೆಪಿ ಮುಖಂಡ ಆರ್.ಸಿ.ನಾರಾಯಣ್ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಸೋಶಿಯಲ್ ಮಿಡಿಯಾದಲ್ಲಿ ಸ್ಕ್ರೀನ್ ಶಾಟ್ ವೈರಲ್ : ಅಡ್ಮಿನ್ ವಿರುದ್ಧ ದೂರು ನೀಡಿದ ಆರ್.ಸಿ. ನಾರಾಯಣ್ –ಕಹಳೆ ನ್ಯೂಸ್
ಪುತ್ತೂರು : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು ಸಾಮಾಜಿಕ ಜಾಲತಾಣಜದಲ್ಲಿ ವೈರಲ್ ಮಾಡಲಾಗಿದೆ.
ತೇಜೋವಧೆ ಮಾಡುತ್ತಿರುವುದಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರ್.ಸಿ. ನಾರಾಯಣ್ ಅವರ ಮೊಬೈಲ್ ಸಂಖ್ಯೆಯನ್ನು ಉದ್ದೇಶ ಪೂರ್ವಕವಾಗಿ ಪದ್ಮರಾಜ ಪರಿವಾರ-ಪುತ್ತೂರು ಎಂಬ ವಾಟ್ಸಪ್ ಗ್ರೂಪ್ ಗೆ ಸೇರ್ಪಡೆ ಮಾಡಿದ್ದು, ಬಳಿಕ ಗ್ರೂಪ್ ನ ಸ್ಕ್ರೀನ್ ಶಾಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸಪ್ ಗ್ರೂಪ್ ನಲ್ಲಿ ಪತ್ತೆ ಎಂದು ಬರೆಯಲಾಗಿದ್ದು, ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲಾಗುತ್ತಿದೆ.
ಕಳೆದ 36 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನಿಷ್ಠಾವಂತನಾಗಿ ದುಡಿದಿದ್ದೇನೆ. ನಾರಾಯಣ ಗುರು ಆದರ್ಶವನ್ನು ಪಾಲಿಸಿಕೊಂಡು ಬಂದಿದ್ದೇನೆ. ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಜಾತಿಯ ಹೆಸರಿನಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ಈ ಮೂಲಕ ಮಾಡಲಾಗಿದೆ. ಈ ಷಡ್ಯಂತ್ರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್.ಸಿ. ನಾರಾಯಣ್ ಆಗ್ರಹಿಸಿದ್ದಾರೆ. ಗ್ರೂಪ್ ಅಡ್ಮಿನ್ ವಿರುದ್ಧ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡಲಾಗಿದೆ.