Sunday, January 19, 2025
ಸುದ್ದಿ

ಮಾಣಿ : ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ, : ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು ಆಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿ ಪಡಿಸಲು ಸಾಧ್ಯಗುತ್ತದೆ ಎಂದು ಸಿವಿಲ್ ಇಂಜಿನಿಯರ್ ಲಿಂಗಪ್ಪ ಗೌಡ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಅವರು ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ 2023-2024 ನೇ ಸಾಲಿನ ಕೊನೆಯ ಹಂತದ ಸಮುದಾಯದತ್ತ ಹಾಗೂ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಏನ್ ಎಮ್ ಪಿ ಟಿ ಯ ಸಿ ಎಸ್ ಆರ್ ನಿಧಿಯಿಂದ ಶಾಲೆಯಲ್ಲಿ ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯವನ್ನು ಮಕ್ಕಳಿಂದ ಉದ್ಘಾಟಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

2023 -2024 ಸಾಲಿನ ವರ್ಷದಲ್ಲಿ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರತಿಭೆಗಳನ್ನು ಗುರುತಿಸಿ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಶಾಲೆಯಿಂದ ಕ್ಲಸ್ಟರ್ ಹಾಗೂ ತಾಲೂಕು ಮಟ್ಟದಲ್ಲಿ ವಿಜೇತರಾದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು. ಶಾಲೆಗೆ ಸಹಕಾರ ನೀಡಿದ ಮಹಾನಿಯರನ್ನು, ಶಾಲಾ ಶಿಕ್ಷಕರನ್ನು, ಅಡುಗೆ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಮುಂದಿನ ವರ್ಷದಿಂದ ಶಾಲೆಯಲ್ಲಿ ಯುಕೆಜಿ ತರಗತಿ ಪ್ರಾರಂಭಿಸುವ ಬಗ್ಗೆ ತೀರ್ಮಾನಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಲ್ಲಿಕಾ ಗಣೇಶ್ಆಚಾರ್ಯ, ಉಪಾಧ್ಯಕ್ಷ ಪ್ರಸಾದ್ ಆಚಾರ್ಯ, ಶಾಲಾ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ಅನುಪ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಡಾ ತ್ರಿವೇಣಿ ರಮೇಶ್ ಸ್ವಾಗತಿಸಿ ಗೌರವ ಶಿಕ್ಷಕಿ ದೀಕ್ಷಾ 2023-24 ನೇ ಸಾಲಿನ ವರದಿಯನ್ನು ವಾಚಿಸಿ, ಸಹ ಶಿಕ್ಷಕ ಉದಯ ಚಂದ್ರ ಬಹುಮಾನಿತರ ಪಟ್ಟಿ ವಾಚಿಸಿ, ಗೌರವ ಶಿಕ್ಷಕಿ ಅಕ್ಷತಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.