Recent Posts

Sunday, January 19, 2025
ಸುದ್ದಿ

ಕೆಎಸ್‌ಆರ್‌ರ್ಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ – ಕಹಳೆ ನ್ಯೂಸ್

ಬೆಂಗಳೂರು: ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಎದುರಾದ ಸಾಲು ರಜೆಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭರ್ಜರಿ ಆದಾಯ ತಂದಿವೆ.

ಅ.22 ರಂದು ಒಂದೇ ದಿನ 18.26 ಕೋಟಿ ಆದಾಯ ಸಂಗ್ರಹವಾಗಿದೆ. ಪ್ರಸಕ್ತ ಸಾಲಿನ ನಿಗಮದ ದಿನವೊಂದರ ಅತ್ಯಧಿಕ ಆದಾಯ ಇದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಲು ರಜೆಗಳ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದನ್ನು ಮನಗುಂಡು ಕೆಎಸ್‌ಆರ್‌ರ್ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ ಅ.17ರಿಂದ ಅ.22 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯದ ನಾನಾ ಭಾಗಗಳಿಗೆ 2,500 ಹೆಚ್ಚುವರಿ ಬಸ್ಗಳ ಕಾರ್ಯಾಚರಣೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು