ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ.
ಅಧಿಕಾರ ಹಿಡಿಯಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು, ಉಪ ಚುನಾವಣೆ ಎದುರಾದ ಕಾರಣ ‘ಆಪರೇಷನ್ ಕಮಲ’ ಕ್ಕೆ ಹಿನ್ನಡೆಯಾಗಿದೆ. ಚುನಾವಣೆ ಬಳಿಕ ಕೆಲ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.
ಆದರೆ ಮಾಜಿ ಸಚಿವ ವಿ. ಸೋಮಣ್ಣ ಬಳ್ಳಾರಿ ಲೋಕಸಭಾ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶ್ರೀರಾಮುಲು ಅವರು ಮುಂದಿನ ಸಿಎಂ ಎಂದು ಹೇಳಿದ್ದಾರೆ. ಸೋಮಣ್ಣ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.