Recent Posts

Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

ಏ.14ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಮಂಗಳೂರಿಗೆ : ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರು : ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏ.14ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಸಂದರ್ಭದಲ್ಲಿ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವುದು ಇಡೀ ಜಿಲ್ಲೆಯ ಪಕ್ಷದ ಪ್ರಮುಖರಾದಿಯಾಗಿ ಕಾರ್ಯಕರ್ತ ಬಂಧುಗಳಲ್ಲಿ ಮಿಂಚಿನ ಸಂಚಲನ ಮೂಡಿಸಿದೆ. ನಾವೆಲ್ಲರೂ ಸರ್ವ ರೀತಿಯ ಜವಾಬ್ದಾರಿಗಳನ್ನು ವಹಿಸಿಕೊಂಡು ನಮೋ ರೋಡ್ ಶೋ ನ ಸಂಪೂರ್ಣ ಯಶಸ್ಸಿಗೆ ಸಹಕರಿಸೋಣವೆಂದು ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ರಾಕೇಶ್ ರೈ ಸೇರಿದಂತೆ ಪಕ್ಷದ ಅನೇಕ ಪ್ರಮುಖರು ಉಪಸ್ಥಿತರಿದ್ದರು.