Recent Posts

Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕೊಕ್ಕಡ : ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ- ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ – ಕಹಳೆ ನ್ಯೂಸ್

ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಇ0ದು ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು. ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಮಂಡಲ ವಿವಿಧ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕೊಕ್ಕಡ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಗೆಮಜಲು, ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯರು, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.