Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರೆಖ್ಯ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಿದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಬೆಳ್ತಂಗಡಿ : ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೆಖ್ಯ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಿ, ಮತಯಾಚನೆ ನಡೆಸಿದರು.

ರೆಖ್ಯ ಗ್ರಾಮದ ಬಿಜೆಪಿ ಹಿರಿಯ ಕಾರ್ಯಕರ್ತರಾದ ಗಿರಿಯಪ್ಪ ಬಂಗೇರ ಅವರ ಮನೆಯಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಜಿಲ್ಲಾ ಮತ್ತು ತಾಲೂಕು ಪ್ರಮುಖರು ಆಗಮಿಸಿ, ಕಾರ್ಯಕರ್ತರೊಂದಿಗೆ, ಮಾತನಾಡಿ, 14ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಳಿದ್ದು, ರೆಖ್ಯದಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತ್ತು ಮುಂಬರುವ ಲೋಕಸಭಾ ಚುನಾವಣಾ ತಯಾರಿಯ ಬಗ್ಗೆ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು