Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಕಾರ್ಯಕರ್ತರ ಉತ್ಸಾಹದಿಂದ ಹೆಚ್ಚಿನ ಶಕ್ತಿ ;ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪ್ರಚಾರದಲ್ಲಿ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಬಾನುವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಪ್ರಧಾನಿಯವರನ್ನು ಹತ್ತಿರದಿಂದ ಭೇಟಿ ಮಾಡುವ ಅವಕಾಶ ರೋಡ್ ಶೋ ಸಂದರ್ಭ ಸಿಗಲಿದ್ದು, ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ, ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಕಾರ್ಯಕರ್ತರ ಭೇಟಿಯ ಸಂದರ್ಭ ಸಿಗುವ ಸಲಹೆ, ಮೂಡುವ ಜನಾಭಿಪ್ರಾಯಗಳನ್ನು ಆಧರಿಸಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಇಚ್ಛೆ ಹೊಂದಿದ್ದೇನೆ. ಚುನಾವಣಾ ಪ್ರಚಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಕಾರ್ಯಕರ್ತರ ಉತ್ಸಾಹದಿಂದ ನನಗೆ ಹೆಚ್ಚಿನ ಬಲ ಬಂದAತಾಗಿದೆ ಎಂದರು