Wednesday, April 2, 2025
ದಕ್ಷಿಣ ಕನ್ನಡಬೈಂದೂರುರಾಜಕೀಯಸುದ್ದಿ

100 ಬೂತ್ ತಲುಪಿದ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನ –ಕಹಳೆ ನ್ಯೂಸ್

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಎನ್ನುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ಬೈಂದೂರು ಕ್ಷೇತ್ರದ ನೂರು ಬೂತ್ ಸಂಪರ್ಕ ಪೂರ್ಣಗೊಂಡಿದೆ.

ಬೈAದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಪಟ್ಟಕ್ಕೆ ಏರಿಸುವ ಸಂಕಲ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷ ಮತಗಳ ಲೀಡ್ ಒದಗಿಸುವ ಸಂಕಲ್ಪದೊAದಿಗೆ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿರಂತರ 18 ದಿನಗಳ ಕಾಲ ನಡೆಯಲಿರುವ ಈ ಅಭಿಯಾನವು 7ನೇ ದಿನವನ್ನು ಯಶಸ್ವಿಯಾಗಿ ತಲುಪಿದ್ದು, 7 ದಿನಗಳಲ್ಲಿ ಬೈಂದೂರು ಕ್ಷೇತ್ರದ 100 ಬೂತ್‌ಗಳಿಗೆ ಕಾರ್ಯಕರ್ತರೊಂದಿಗೆ ಶಾಸಕ ಗಂಟಿಹೊಳೆ ಅವರು ಭೇಟಿ ನೀಡಿದ್ದಾರೆ. ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನದಡಿಯಲ್ಲಿ ಕಾರ್ಯಕರ್ತರು ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ರಾಘವೇಂದ್ರ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಲುಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ