Thursday, April 3, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಂಗ್ರೆಸ್‌ಗೆ ಸೋಲಿನ ಮುನ್ಸೂಚನೆ ಸಿಕ್ಕಂತಿದೆ, ಹತಾಶೆಯಿಂದ ಅಪಪ್ರಚಾರಕ್ಕಿಳಿದ ಕಾಂಗ್ರೆಸ್ ಕಾರ್ಯಕರ್ತರು: ನಂದನ್ ಮಲ್ಯ –ಕಹಳೆ ನ್ಯೂಸ್

ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಪಕ್ಷ ಹಾಗೂ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ. ಇದರಿಂದಾಗಿ ಅವರಿಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಆರೋಪಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ ತೊಡಗಿರುವ ನಕಲಿ ಖಾತೆಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿ ಸೈಬರ್ ಕ್ರೈಮ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರಿನ ರೋಡ್ ಶೋನ ಬಗ್ಗೆ ಯುವಕರು ಎದುರು ನೋಡುತ್ತಿದ್ದಾರೆ. ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲ್ಲುವುದು ನಿಶ್ಚಿತ, ಗೆಲುವಿನ ಅಂತರ ಹೆಚ್ಚಿಸುವ ಬಗ್ಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರಳು ದುಡಿಯುತ್ತಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ