ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪದಚ್ಯುತಿಗೊಳಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಾರ್ಯ ಆರಂಭವಾಗಿದೆ.
ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸುತ್ತಿದ್ದಾರೆ. ಮೈಸೂರು ಮೂಲಕ ಪುಷ್ಪಾ ಅಮರನಾಥ್, ನಾಗಲಕ್ಷ್ಮೀ ಚೌಧರಿ, ಕಮಲಾಕ್ಷಿ ರಾಜಣ್ಣ, ಶಾರದಾ ಗೌಡ, ಗೀತಾ ರಾಜಣ್ಣ ಸೇರಿದಂತೆ 12 ಮಹಿಳಾ ನಾಯಕಿಯರ ಸಂದರ್ಶನ ನಡೆದಿದೆ.ಇವರಲ್ಲಿ ಯಾರಾದರೂ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡುವ ಒತ್ತಡ ಕೇಳಿಬರುತ್ತಿದೆ.