Sunday, January 19, 2025
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಪು ಮಂಡಲ ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು ಮಂಡಲ ಬಿಜೆಪಿ ವತಿಯಿಂದ  ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸವಿಂಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ನಡೆಯಿತು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಯುಗಾದಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ಕಾಮತ್, ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಮರವಂತೆ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಕೇಸರಿ ಯುವರಾಜ್, ರಾಜೇಶ್ ಕುಂದರ್, ಪ್ರಧಾನ ಕಾರ್ಯದರ್ಶಿಗಳಾದ ಶಶಿಪ್ರಭಾ ಶೆಟ್ಟಿ, ವಕ್ತಾರರಾದ ನವೀನ್ ಎಸ್.ಕೆ, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್, ರಾಜ್ಯ ಬಿಜೆಪಿಯ ನಿಕಟಪೂರ್ವ ಉಪಾಧ್ಯಕ್ಷರಾದ ನಯನ ಗಣೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು