Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ ಪ್ರಕರಣ : ಆಸ್ಪತ್ರೆಗೆ ಬೇಟಿ ನೀಡಿ, ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಜೊತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಜಕ್ರಿಬೆಟ್ಟು ನಿವಾಸಿ ಹಿಂದೂ ಯುವಸೇನೆಯ ಮುಖಂಡ ಹಾಗೂ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಚೂರಿ ಇರಿದಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ,ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ವಿಷಯ ತಿಳಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.