Recent Posts

Monday, January 27, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ –ಕಹಳೆ ನ್ಯೂಸ್

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ.

ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿAದ ಪುತ್ತೂರುಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹÀಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ನಡೆದ ಕೂಡಲೇ ಸಂಚಾರ ಪೋಲೀಸರು ಬೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬAಧಿಸಿದAತೆ ಬಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು