Recent Posts

Monday, January 27, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ ಪ್ರಕರಣ : ಪರಾರಿಯಾಗಿದ್ದ ಆರೋಪಿ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದು, ಎ.೧೪ರಂದು ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್ ಎಂಬಾತನಿಗೆ ರವಿ ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಚೂರಿ ಇರಿತದಿಂದ ಗಾಯಗೊಂಡಿದ್ದ ಪುಷ್ಪರಾಜನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಬಳಿಕ ಆರೋಪಿ ರವಿ ಮೊಬೈಲ್ ಫೋನ್ ಸ್ವಿಚ್ ಆಪ್ ಮಾಡಿ ಪರಾರಿಯಾಗಿದ್ದ. ಇದೀಗ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಈತನನ್ನು ಕಾವಳಕಟ್ಟೆ ಎಂಬಲ್ಲಿAದ ಪೋಲೀಸರು ವಶಕ್ಕೆ ಪಡೆದುಕೊಂಡು ಗಲಾಟೆಗೆ ಸಂಬAಧಿಸಿದAತೆ ವಿಚಾರಣೆ ನಡೆಸುತ್ತಿದ್ದಾರೆ. ಚೂರಿ ಇರಿದ ಘಟನೆಗೆ ಸ್ಪಷ್ಟವಾದ ಕಾರಣ ಪೋಲಿಸ್ ತನಿಖೆಯ ಬಳಿಕ ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು